Bidar, ಏಪ್ರಿಲ್ 16 -- ಬೀದರ್‌ : ಕರ್ನಾಟಕದ ಗಡಿ ಜಿಲ್ಲೆಯಾದ ಬೀದರ್‌ ಭಾಗದ ಜನರಿಗೆ ಸಂತಸದ ವಿಚಾರ ಇಲ್ಲಿದೆ. ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಿಂದ ಬೀದರ್‌ ನಡುವೆ ಸ್ಥಗಿತಗೊಂಡಿದ್ದ ವಿಮಾನ ಸಂಚಾರ ಪುನಾರಂಭಗೊಳ್ಳಲಿದೆ. ಬುಧವಾರದಂದು ಬೆಂಗಳೂರು ಹಾಗೂ ಬೀದರ್‌ ನಡುವಿನ ವಿಮಾನ ಸಂಚಾರ ಸೇವೆಗೆ ಚಾಲನೆ ನೀಡಲಾಗುತ್ತಿದ್ದು. ಗುರುವಾರಿಂದ ಅಧಿಕೃತವಾಗಿಯೇ ಪ್ರಯಾಣ ಪುನಾರಂಭಗೊಳ್ಳಲಿದೆ. ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದ ಮಂಡಳಿ ಅನುದಾನ ಒದಗಿಸಿರುವುದರಿಂದ ಅದನ್ನು ಬಳಕೆ ಮಾಡಿಕೊಂಡು ಮತ್ತೆ ವಿಮಾನ ಸೇವೆ ಆರಂಭಿಸುತ್ತಿರುವುದು ವಿಶೇಷ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ಜನತೆ ಬೀದರ್‌ನಿಂದ ಬೆಂಗಳೂರಿಗೆ ವಿಮಾನ ಸೇವೆ ಪಡೆದು ಬೇಗ ತಲುಪಲು ಸಹಕಾರಿಯಾಗಲಿದೆ.

ಏಪ್ರಿಲ್‌ 16ರ ಬುಧವಾರ ಸಂಜೆ 4 ಗಂಟೆಗೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಮ...