ಭಾರತ, ಮಾರ್ಚ್ 23 -- ವಾರ ಭವಿಷ್ಯ: ನಾಳೆ ಏನಾಗುವುದೋ ಬಲ್ಲವರು ಯಾರು ಎನ್ನುವುದು ತತ್ವಶಾಸ್ತ್ರದ ದೊಡ್ಡ ಮಾತು. ಜನಪ್ರಿಯ ಭಕ್ತಿಗೀತೆಯ ಸಾಲೂ ಹೌದು. ಎಷ್ಟೋ ಜನರು ದಿನ ಆರಂಭಿಸುವ ಮೊದಲು, ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಅಂಥವರಿಗೆ ಕೈದೀವಿಗೆಯಾಗುವ ಬರಹ ಇದು. 2025ರ ಮಾರ್ಚ್‌ 23ರ ಭಾನುವಾರದಿಂದ ಮಾರ್ಚ್ 29ರ ಶನಿವಾರದವರೆಗಿನ ವಾರ ಭವಿಷ್ಯವನ್ನು ಇಲ್ಲಿ ನೀಡಲಾಗಿದೆ.

ಎಲ್ಲರನ್ನೂ ಸಮಾನ ಭಾವನೆಯಿಂದ ಕಾಣುವಿರಿ. ಮನಸ್ಸಿನಲ್ಲಿ ಯಾವುದೇ ರೀತಿಯ ಕಲ್ಮಶ ಇರುವುದಿಲ್ಲ. ಆರಂಭಿಸುವ ಕೆಲಸ ಕಾರ್ಯಗಳು ಸಣ್ಣಮಟ್ಟದಲ್ಲಿದ್ದರೂ ಶ್ರದ್ಧೆಯಿಂದ ನಿರ್ವಹಿಸುವಿರಿ. ಬುದ್ಧಿವಂತಿಕೆಯಿಂದ ಕುಟುಂಬದ ಸಮಸ್ಯೆಗಳನ್ನು ಪರಿಹರಿಸುವಿರಿ. ಸಮಯವನ್ನು ವ್ಯರ್ಥ ಮಾಡಿಕೊಳ್ಳದೇ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಿರಿ. ಕುಟುಂಬ ಮಾತ್ರವಲ್ಲದೆ ಸಮಾಜದಲ್ಲಿಯೂ ವಿಶೇಷವಾದ ಗೌರವ ದೊರೆಯುತ್ತದೆ. ಹಣಕಾಸಿನ ತೊಂದರೆ ಇರುವುದಿಲ...