ಭಾರತ, ಮೇ 12 -- ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ ಮಹಾನ್‌ ದಾರ್ಶನಿಕ. ಸಿದ್ಧಾರ್ಥ ಎನ್ನುವ ರಾಜವಂಶದ ಕುಡಿ ಸಕಲ ವೈಭೋಗವನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ, ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಭೋಧಿಸುತ್ತಾನೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿ ವರ್ಷ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ವರ್ಷ ಇಂದು ಅಂದರೆ ಮೇ 12ಕ್ಕೆ ಬುದ್ಧ ಪೂರ್ಣಿಮೆ ಆಚರಣೆ ಇದೆ. ಇದನ್ನು ಬುದ್ಧ ಜಯಂತಿ ಎಂದು ಕೂಡ ಕರೆಯಲಾಗುತ್ತದೆ.

ಬುದ್ಧ ಪೂರ್ಣಿಮೆಯು ಬೌದ್ಧಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾಗಿದೆ. ಈ ಬಾರಿ ನಾವು ಭಗವಾನ್ ಬುದ್ಧನ 2587ನೇ ಜನ್ಮ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ. ಥಾಯ್ಲೆಂಡ್‌, ಚೀನಾ, ಕಾಂಬೋಡಿಯಾ, ನೇಪಾಳ, ಶ್ರೀಲಂಕಾ ಮತ್ತು ಟಿಬೆಟ್ ಸೇರಿದಂತೆ ಅನೇಕ ಏಷ್ಯಾದ ದೇಶಗಳು ಬುದ್ಧ ಪೂರ್ಣಿಮೆಯನ್ನು ಆಚರಿಸುತ್ತವೆ.

ಸಾಮಾನ್ಯವಾಗಿ ವೈಶಾಖ ಮಾಸದ ಹುಣ್ಣಿಮೆಯ ದಿನ ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆಯಾದರೂ, ಗ್ರೆಗೋರಿಯನ...