ಭಾರತ, ಏಪ್ರಿಲ್ 23 -- ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಮತ್ತು ಆರ್‌ವಿ ಎಂಜಿಯರಿಂಗ್ ಕಾಲೇಜ್‌ಗೆ ಬಾಂಬ್ ಬೆದರಿಕೆ ಇಮೇಲ್ ರವಾನೆಯಾಗಿತ್ತು. ವಿಷಯ ತಿಳಿದ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು ಎರಡೂ ಸಂಸ್ಥೆಗಳಲ್ಲಿ ಪರಿಶೀಲನೆ ನಡೆಸಿ ಅದು ಹುಸಿ ಬಾಂಬ್ ಬೆದರಿಕೆ ಎಂಬುದನ್ನು ಖಾತರಿಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್‌ ಕಾಲೇಜು ಸೇರಿ ಎರಡು ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ನಿನ್ನೆ ರವಾನೆಯಾಗಿದೆ. ಆರ್‌ವಿ ಎಂಜಿನಿಯರಿಂಗ್ ಕಾಲೇಜು ಹಾಗೂ ಕರ್ನಾಟಕ ಚಿತ್ರಕಲಾ ಪರಿಷತ್‌ಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಕೂಡಲೇ ಪೊಲೀಸರಿಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಬಾಂಬ್‌ ನಿಷ್ಕ್ರಿಯ ತಂಡದೊಂದಿಗೆ ಆಗಮಿಸಿದ ಪೊಲೀಸರು, ಕಾಲೇಜಿನ ವಿದ್ಯಾರ್ಥಿ ಸಿಬ್ಬಂದಿಯನ್ನು ಸುರಕ್ಷಿತವಾಗಿ ಅಲ್ಲಿಂದ ಹೊರ ಕಳುಹಿಸಿದ್ದು, ಬಳಿಕ ಕಾಲೇಜು ಪೂರ್ತಿ ಕೂಲಂಕಷವಾಗಿ ಪರಿಶೀಲನೆ ನಡೆಸಿ ಬಾಂಬ್‌ಗಾಗಿ ಶೋಧ ನಡೆಸಿದೆ. ಮಂಗಳವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಬಾಂಬ್ ಪತ್ತೆಯಾಗಿಲ್...