ಭಾರತ, ಮಾರ್ಚ್ 27 -- ಬೆಂಗಳೂರು: ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದ ಅಮಾನುಷ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕನ್ನಹಳ್ಳಿಯ ಮನೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಆರೋಪಿ ಪತಿ ರಾಕೇಶ್ ಎಂಬಾತ ತನ್ನ ಪತ್ನಿ 32 ವರ್ಷದ ಗೌರಿ ಅನಿಲ್ ಸಾಂಬೆಕರ್ ಅವರನ್ನು ಹತ್ಯೆ ಮಾಡಿ ಮೃತದೇಹವನ್ನು ತುಂಡರಿಸಿ ಸೂಟ್ ಕೇಸ್ನಲ್ಲಿ ತುಂಬಿಟ್ಟಿದ್ದ. ನಂತರ ಆತನೇ ಈ ವಿಚಾರವನ್ನು ಪತ್ನಿಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ನಂತರ ಮಹಾರಾಷ್ಟ್ರ ಪೊಲೀಸರ ಮಾಹಿತಿ ಅನ್ವಯ ಬೆಂಗಳೂರಿನ ಹುಳಿಮಾವು ಪೊಲೀಸರು ರಾಕೇಶ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಕೇಶ್ ನ ಅಮಾನುಷ ವರ್ತನೆಗೆ ದೊಡ್ಡ ಕನ್ನಹಳ್ಳಿಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಕೊನೆಗೂ ರಾಕೇಶ್‌ ನನ್ನು ಪುಣೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಒಂದು ವರ್ಷದಿಂದ ಬೆಂಗಳೂರಿನ ದೊಡ್ಡ ಕನ್ನಹಳ್ಳಿಯ ಮನೆಯಲ್ಲಿ ವಾಸವಿದ್ದ ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿಗಳಿಬ್...