ಭಾರತ, ಫೆಬ್ರವರಿ 3 -- Karnataka Investors summit 2025: ಕರ್ನಾಟಕದ ಹೂಡಿಕೆದಾರರ ಸಮಾವೇಶ 2025ಕ್ಕೆ ಸಿದ್ದತೆಗಳು ಪೂರ್ಣಗೊಂಡಿದ್ದು, ಇದೇ ತಿಂಗಳ 12ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಮಾವೇಶದ ಮೂಲಕ ಸುಮಾರು 10 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯನ್ನು ರಾಜ್ಯಕ್ಕೆ ಆಕರ್ಷಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಫೆಬ್ರವರಿ 11ರ ಸಂಜೆಯೇ ಸಮಾವೇಶವನ್ನು ಉದ್ಘಾಟಿಸಲಾಗುತ್ತಿದೆ. ಈಗಾಗಲೇ 2,000ಕ್ಕೂ ಹೆಚ್ಚು ಹೂಡಿಕೆದಾರರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರಿ, ನೋಂದಾಯಿಸಿಕೊಂಡಿದ್ದಾರೆ. ಸಮಾವೇಶದಲ್ಲಿ 18 ದೇಶಗಳು ಪಾಲ್ಗೊಳ್ಳುತ್ತಿದ್ದು, ಈ ಪೈಕಿ 9 ದೇಶಗಳು ಪ್ರತ್ಯೇಕ ಪೆವಿಲಿಯನ್ ಹೊಂದಿರಲಿವೆ.

ಮೊದಲು ಕರ್ನಾಟಕ, ಮಹಾರಾಷ್ಟ್ರ, ಗುಜರಾತಿನಂತಹ ಕೆಲವೇ ರಾಜ್ಯಗಳು ಮಾತ್ರ ಹೂಡಿಕೆದಾರರ ಸಮಾವೇಶ ನಡೆಸುತ್ತಿದ್ದವು. ಈಗ ಹೆಚ್ಚಿನ ರಾಜ್ಯಗಳು ಇಂಥ ಸಮಾವೇಶ ಹಮ್ಮಿಕೊಳ್ಳುತ್ತಿವೆ. ಈ ಸಲದ ಸಮಾವೇಶದಲ್ಲಿ ಕುಮಾರ್ ಬಿರ್ಲಾ, ಆನಂದ್ ಮಹ...