ಭಾರತ, ಏಪ್ರಿಲ್ 21 -- ಕರ್ನಾಟಕ ಹವಾಮಾನ: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬೇಸಿಗೆಯ ಸಹಜ ವಾತಾವರಣ ಕಂಡುಬರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆ ಸಾಧ್ಯತೆ ಇದ್ದು, ಉಳಿದಂತೆ ರಾಜ್ಯದ ಉತ್ತರ ಒಳನಾಡು ಭಾಗದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ ಹಾಗೂ ಕನಿಷ್ಠ ತಾಪಮಾನದಲ್ಲಿ ಹೆಚ್ಚೇನೂ ವ್ಯತ್ಯಾಸವಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರಾವಳಿ ಕರ್ನಾಟಕ: ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು (ಏಪ್ರಿಲ್ 21) ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವಿಜ್ಞಾನಿ ...