ಭಾರತ, ಏಪ್ರಿಲ್ 12 -- Karnataka Weather: ಕರ್ನಾಟಕದಲ್ಲಿ ಇಂದು (ಏಪ್ರಿಲ್ 12) ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದ್ದು, ಕೆಲವು ಕಡೆ ಮಳೆಯಾಗಬಹುದು. ಕರಾವಳಿ ಕರ್ನಾಟಕದ ಜಿಲ್ಲೆಗಳು, ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರ ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ನಿನ್ನೆ (ಏಪ್ರಿಲ್ 11) ಮಳೆ ಸುರಿದ ಕಾರಣ ವಾತಾವರಣ ತಂಪಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ನಿನ್ನೆ ಗರಿಷ್ಠ ತಾಪಮಾನ 32-33 ಡಿಗ್ರಿ ಸೆಲ್ಶಿಯಸ್‌ ಮತ್ತು ಕನಿಷ್ಠ ತಾಪಮಾನ 22-23 ಡಿಗ್ರಿ ಸೆಲ್ಶಿಯಸ್‌ ನಡುವೆ ಇತ್ತು. ಇಂದು (ಏಪ್ರಿಲ್ 12) ಕೂಡ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮಳೆಯಾಗಬಹುದು. ಬೆಂಗಳೂ...