Bengaluru, ಮೇ 18 -- ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಸುಮಾರು 40 ಮಿ.ಮೀ ಮಳೆಯಾಗಿದೆ. ರಾಜ್ಯ ರಾಜಧಾನಿಯ ಕೆಲವು ಭಾಗಗಳಲ್ಲಿ ಮರದ ಕೊಂಬೆಗಳು ನೆಲಕ್ಕುರುಳಿವೆ. ನಗರದ ಸಾಯಿ ಲೇಔಟ್‌ನಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಇದರಿಂದಾಗಿ ಸ್ಥಳೀಯರು ತೊಂದರೆ ಅನುಭವಿಸುವಂತಾಗಿದೆ. ಜತೆಗೆ ಸಂಜೆಯ ಮಳೆಯಿಂದಾಗಿ ಮತ್ತೆ ವಾಹನ ಸವಾರರು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಪರದಾಡುವಂತಾಗಿದೆ.
ಪ್ರವಾಹಕ್ಕೆ ಸಿಲುಕಿದ ಮನೆಗಳಲ್ಲಿನ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿವೆ. ವಾಹನಗಳು ಭಾಗಶಃ ಮುಳುಗಿದ್ದು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಕೂಡ ಹಾನಿಯಾಗಿದೆ. ಕೆಳಮಹಡಿ ಮತ್ತು ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದರಿಂದ, ತೊಂದರೆಗೊಳಗಾದ ಕುಟುಂಬಗಳನ್ನು ಹತ್ತಿರದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಮುಚ್ಚಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.