ಭಾರತ, ಫೆಬ್ರವರಿ 4 -- Bengaluru Ratha Saptami: ಬೆಂಗಳೂರು ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಫೆ 4) ರಥ ಸಪ್ತಮಿ ಜಾತ್ರಾ ಮಹೋತ್ಸವದ ಕಾರಣ ಸಂಚಾರ ವ್ಯವಸ್ಥೆ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ. ಈ ಸಂಚಾರ ವ್ಯವಸ್ಥೆ ಬದಲಾವಣೆಯು ಇಂದು ಸಂಜೆ 7 ಗಂಟೆಯಿಂದ ನಾಳೆ (ಫೆ 5) ಬೆಳಗ್ಗೆ 9 ಗಂಟೆ ತನಕ ಚಾಲ್ತಿಯಲ್ಲಿ ಇರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಡುಗೋಡಿ ಮುಖ್ಯ ರಸ್ತೆಯಲ್ಲಿ ರಥ ಸಪ್ತಮಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ದೇವರುಗಳ ಸುಮಾರು 32 ಕ್ಕೂ ಹೆಚ್ಚು ಪಲ್ಲಕ್ಕಿಗಳ ಮೆರವಣಿಗೆ ಕಾರ್ಯಕ್ರಮ ಇದ್ದು, ಸದರಿ ರಥಸಮಪ್ತಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ ಎಂದು ಪೊಲೀಸರು ವಿವರಿಸಿದ್ದಾರೆ

ರಥ ಸಪ್ತಮಿ ಜಾತ್ರಾ ಮಹೋತ್ಸವ ನಡೆಯುವ ಆಡುಗೋಡಿ ಮುಖ್ಯ ರಸ್ತೆಯಲ್ಲಿ ಆನೇಪಾಳ್ಯ ಜಂಕ್ಷನ್‌ನಿಂದ ಯುಕೋ ಬ್...