Bengaluru, ಮಾರ್ಚ್ 9 -- Bengaluru Summer: ಬೆಂಗಳೂರು ಸುತ್ತಮುತ್ತ ಶುಕ್ರವಾರ (ಮಾರ್ಚ್ 7) ಈ ವರ್ಷದ (2025) ಗರಿಷ್ಠ ತಾಪಮಾನ ದಾಖಲಾಗಿದೆ. ಸುಡು ಬಿಸಿಲು ಅನುಭವ ಉಂಟಾಗಿದ್ದು, ಶುಕ್ರವಾರ 34.6 ಡಿಗ್ರಿ ಸೆಲ್ಶಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇದು ವಾಡಿಕೆಯ ತಾಪಮಾನಕ್ಕಿಂತ 1.9 ಡಿಗ್ರಿ ಸೆಲ್ಶಿಯಸ್ ಅಧಿಕ ಎಂದು ಇಲಾಖೆ ಹೇಳಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ 33 ಡಿಗ್ರಿ ಸೆಲ್ಶಿಯಸ್‌ನಿಂದ 34 ಡಿಗ್ರಿ ಸೆಲ್ಶಿಯಸ್ ತನಕ ಗರಿಷ್ಠ ತಾಪಮಾನ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ತನಕ ದಾಖಲಾಗಬಹುದು ಎಂದು ಮುನ್ಸೂಚನೆ ನೀಡಿತ್ತು

ಬೆಂಗಳೂರಲ್ಲಿ ಈ ವರ್ಷದ (2025) ಗರಿಷ್ಠ ತಾಪಮಾನ ದಾಖಲಾಗಿದೆ. ಶುಕ್ರವಾರ (ಮಾರ್ಚ್ 7) 34.6 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದ್ದು, ಇಂದು (ಮಾರ್ಚ್ 9) ಕೂಡ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಪ್ರಾ...