Bengaluru, ಮಾರ್ಚ್ 27 -- ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿ ನಟಿಸಿರುವ 'ಎಲ್-2:ಎಂಪುರಾನ್' ಇಂದು (ಮಾ. 27) ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಲೂಸಿಫರ್ ಸೀಕ್ವೆಲ್ ಆಗಿರುವುದರಿಂದ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಪೃಥ್ವಿರಾಜ್ ಸುಕುಮಾರನ್ ಈ ಚಿತ್ರಕ್ಕೆ ಸ್ಯಾಂಡಲ್ವುಡ್ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸಾಥ್ ನೀಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ 'ಎಲ್-2:ಎಂಪುರಾನ್' ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

L2E: ಎಂಪುರಾನ್ ಚಿತ್ರಕ್ಕೆ ಕಥೆ ಮುರಳಿ ಗೋಪಿ ಬರೆದಿದ್ದಾರೆ, ದೀಪಕ್ ದೇವ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಸುಜಿತ್ ವಾಸುದೇವ್ ಅವರ ಛಾಯಾಗ್ರಹಣವಿದೆ. ಸುರೇಶ್ ಬಾಲಾಜೆ ಮತ್ತು ಜಾರ್ಜ್ ಪಯಸ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಮೋಹನ್ದಾಸ್ ಕಲಾ ನಿರ್ದೇಶಕರಾಗಿ ದುಡಿದ್ದಾರೆ.

2019ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದ ...