ಭಾರತ, ಫೆಬ್ರವರಿ 24 -- ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು ದಾಖಲಿಸಿ 5.60 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಸದಂತೆ ಜಲಮಂಡಳಿ ಕಳೆದ ವಾರ ಸುತ್ತೋಲೆ ಹೊರಡಿಸಿತ್ತು. ನೀರು ಪೋಲು ಮಾಡುವವರ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

ಆದರೂ ಕುಡಿಯುವ ನೀರನ್ನು ಅನ್ಯ ಉದ್ಧೇಶಗಳಿಗೆ ಬಳಸುತ್ತಿದ್ದ ನಾಗರೀಕರನ್ನು ಪತ್ತೆಹಚ್ಚಿ ದಂಡ ವಿಧಿಸಲಾಗಿದೆ. ಫೆಬ್ರುವರಿ 23 ರವರೆಗೆ 112 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು (33) ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ ಎಂದು ...