ಭಾರತ, ಮಾರ್ಚ್ 18 -- Occupancy Certificate in Karnataka: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ)ವು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಈ ನಿರ್ದೇಶನವು ಆಕ್ಯುಪೆನ್ಸಿ ಪ್ರಮಾಣಪತ್ರಗಳನ್ನು ಹೊಂದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕವನ್ನು ನೀಡುವ ಅವಕಾಶವನ್ನು ಒದಗಿಸಬೇಕು ಎಂಬ ಅಂಶವನ್ನು ಒತ್ತಿ ಹೇಳುತ್ತದೆ.

2024 ಡಿಸೆಂಬರ್ 17ರ ಸುಪ್ರಿಂಕೋರ್ಟ್‌ ತೀರ್ಪಿನ ಪ್ರಕಾರ ಹೊಸ ಕಟ್ಟಡಗಳು ಅನುಮೋದಿತ ಯೋಜನೆಗೆ ಬದ್ಧವಾಗಿದ್ದರೆ ಮತ್ತು ಯಾವುದೇ ನಿಮಯಗಳನ್ನು ಉಲ್ಲಂಘನೆ ಮಾಡದೇ ಇದ್ದರೆ ಮಾತ್ರ ಆಕ್ಯುಪೆನ್ಸಿ ಪ್ರಮಾಣಪತ್ರ ನೀಡಬೇಕು ಎಂದಿದೆ. ಮಂಗಳೂರು, ಹುಬ್ಬಳ್ಳಿ, ಚಾಮುಂಡೇಶ್ವರಿ ಮತ್ತು ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿಗಳಂತಹ ವಿದ್ಯುತ್ ಸರಬರಾಜು ಸಂಸ್ಥೆಗಳು ಮತ್ತು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಈ ನಿಯಮಗಳಿಗೆ ಬದ್ಧವಾಗಿದೆ.

ಜನವರಿ 9ರಂದು ಬಿಬಿಎಂಪಿ...