ಭಾರತ, ಮೇ 27 -- ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಯುನೈಟೆಡ್‌ ಕಿಂಗ್‌ಡಮ್‌ನ ಪ್ರತಿಷ್ಠಿತ ಲಿವರ್‌ಪೂಲ್ ವಿಶ್ವವಿದ್ಯಾಲಯವು (University of Liverpool) ಭಾರತದಲ್ಲಿ ತನ್ನ ಕ್ಯಾಂಪಸ್‌ ತೆರೆಯುತ್ತಿದೆ. ಅದು ಕೂಡಾ ಕರ್ನಾಟಕದ ರಾಜಧಾನಿ, ಉದ್ಯಾನ ನಗರಿ ಬೆಂಗಳೂರಿನಲ್ಲಿ ವಿವಿ ಕ್ಯಾಂಪಸ್‌ ಆರಂಭವಾಗಲಿದೆ. ಇದು ಭಾರತದ ಮೊದಲ ವಿದೇಶಿ ವಿಶ್ವವಿದ್ಯಾಲಯ ಕ್ಯಾಂಪಸ್ ಆಗಲಿದೆ. ಇದಕ್ಕಾಗಿ ವಿಶ್ವವಿದ್ಯಾಲಯ ಧನಸಹಾಯ ಆಯೋಗದಿಂದ (ಯುಜಿಸಿ) ಔಪಚಾರಿಕ ಅನುಮೋದನೆಯೂ ಸಿಕ್ಕಿದೆ. ಮೇ 26ರ ಸೋಮವಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಲಾಗಿದೆ.

ಯುಕೆಯ ಪ್ರತಿಷ್ಠಿತ ರಸೆಲ್ ಗ್ರೂಪ್‌ನ ಭಾಗವಾಗಿರುವ ಲಿವರ್‌ಪೂಲ್ ವಿಶ್ವವಿದ್ಯಾಲಯವು, 2026ರ ಆಗಸ್ಟ್ ತಿಂಗಳಲ್ಲಿ ತನ್ನ ಮೊದಲ ಬ್ಯಾಚ್‌ನ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದೆ. ಅಂದರೆ, ಇನ್ನೊಂದು ವರ್ಷದಲ್ಲಿ ಬೆಂಗಳೂರಿನಲ್ಲಿ ಲಿವರ್‌ಪೂಲ್ ವಿಶ್ವವಿದ್...