Bangalore, ಮೇ 15 -- ಬೆಂಗಳೂರು: ಬೆಂಗಳೂರು ಮಹಾನಗರದ ಹಲವು ಭಾಗಗಳಲ್ಲಿ ಮೂರ್ನಾಲ್ಕು ದಿನದಿಂದ ಉತ್ತಮ ಮಳೆಯೇ ಆಗುತ್ತಿದೆ. ಮೇ 15ರ ಗುರುವಾರವೂ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಇದಲ್ಲದೇ ದಕ್ಷಿಣ ಕರ್ನಾಟಕದ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಬಹುದು ಎನ್ನುವ ಮಾಹಿತಿಯನ್ನು ನೀಡಲಾಗಿದೆ. ಮೈಸೂರು, ಕೋಲಾರ, ದಾವಣಗೆರೆ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ ಭಾಗದಲ್ಲಿ ಉತ್ತಮ ಮಳೆಯಾಗಬಹುದು. ಈ ವಾರಾಂತ್ಯದವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.

Published by HT Digital Content Services with permission from HT Kannada....