ಭಾರತ, ಏಪ್ರಿಲ್ 1 -- ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ಮತ್ತು ಬಿಜೆಪಿ ನಾಯಕ ತೇಜಸ್ವಿ ಸೂರ್ಯ ಅವರು ತಮ್ಮ ಕ್ಷೇತ್ರದ 10 ಕೇಂದ್ರಗಳಲ್ಲಿ 8 ರಿಂದ 14 ವರ್ಷ ವಯಸ್ಸಿನ ಮಕ್ಕಳಿಗಾಗಿ ಒಂದು ವಾರದ ಬೇಸಿಗೆ ಶಿಬಿರವನ್ನು ಪ್ರಾರಂಭಿಸಿದ್ದಾರೆ. ಮಕ್ಕಳು ತಮ್ಮ ಬೇಸಿಗೆ ರಜಾದಿನಗಳನ್ನು ಸದುಪಯೋಗಪಡಿಸಿಕೊಂಡು ಹೊಸ ಕೌಶಲ್ಯಗಳನ್ನು ಕಲಿಯಲು ಅವಕಾಶಗಳನ್ನು ಒದಗಿಸುವ ಸಲುವಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಿಂದ ಮಕ್ಕಳು ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಯಾಕೆಂದರೆ ಸಾಕಷ್ಟು ರೀತಿಯ ಕೌಶಲಗಳನ್ನು ಅಭಿವೃದ್ಧಿಪಡಿಸಿಕೊಳ್ಳುವ ರೀತಿಯಲ್ಲಿ ಈ ಶಿಬಿರವನ್ನು ನಡೆಸಲಾಗುತ್ತಿದೆ.

ಈ ಶಿಬಿರದಲ್ಲಿ ಯೋಗ, ಧ್ಯಾನ, ಗೀತಾ ಪಠಣ, ನೃತ್ಯ ಫಿಟ್‌ನೆಸ್, ಆತ್ಮರಕ್ಷಣೆ ಮತ್ತು ಚಿತ್ರ ಬಿಡಿಸುವ ತರಬೇತಿ ನೀಡಲಾಗುತ್ತಿದೆ. ಸುಮಾರು 2,500 ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಂಡಿದ್ದು, ಶೈಕ್ಷಣಿಕ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಬೇಸಿಗೆ ರಜೆಯಲ್ಲಿ ಮಕ್ಕಳು ಕಲಿಕೆಯೊಂದಿಗೆ ಖುಷಿಪಡಲಿ ಎನ್ನುವ ಕಾರಣಕ...