Bengaluru, ಮೇ 6 -- ಬೆಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಹಲವು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಸುಮಾರು 1.50 ಕೋಟಿ ರೂ. ಮೌಲ್ಯದ ಡ್ರಗ್ಸ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ ವಾಹನಗಳನ್ನುವಶಪಡಿಸಿಕೊಂಡಿದ್ದಾರೆ. ಹೆಚ್.ಎಸ್.ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ ಆತನಿಂದ 62 ಕೆಜಿ ಗಾಂಜಾ ಮತ್ತು ಐಷರ್ ಗೂಡ್ಸ್ ಕ್ಯಾರಿಯರ್ ವಾಹನವನ್ನು ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ರೂ.60 ಲಕ್ಷ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯು ಹೆಚ್‌ಎಸ್ಆರ್ ಲೇಔಟ್ , 4ನೇ ಸೆಕ್ಟರ್, ಪ್ರೀಡಂ ಇಂಟರ್ ನ್ಯಾಷನಲ್ ಸ್ಕೂಲ್ ಹತ್ತಿರದ ರಸ್ತೆಯಲ್ಲಿ ಓರ್ವ ವ್ಯಕ್ತಿಯು ಗಾಂಜಾವನ್ನು ಐಷರ್ ಗೂಡ್ಸ್ ಕ್ಯಾರಿಯರ್ ವಾಹನದಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿರುವ ಮಾಹಿತಿ ಲಭ್ಯವಾಗಿರುತ್ತದೆ. ಈ ಮಾಹಿತಿಯನ್ನಾಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ ಎನ್.ಡಿ.ಪಿ.ಎಸ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.