Bengaluru, ಮೇ 25 -- ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 25) ವಿವಿಧ ಬಡಾವಣೆ ಮತ್ತು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನಲ್ಲಿ ಭಾನುವಾರವೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಉತ್ತರ ಕರ್ನಾಟಕದ ವಿವಿಧ ಪ್ರದೇಶ ಮತ್ತು ಕಲಬುರಗಿಯಲ್ಲಿ ಕೂಡಾ ಇಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕಾರವಾರ, ಹೊನ್ನಾವರ ಸಹಿತ ಉತ್ತರ ಕನ್ನಡದ ವಿವಿಧೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಭಾನುವಾರ (ಮೇ 25) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.