Bengaluru, ಮೇ 28 -- ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 28) ವಿವಿಧ ಬಡಾವಣೆ ಮತ್ತು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಮತ್ತು ಮಲೆನಾಡಿನಲ್ಲಿ ಇಂದು ಕೂಡ ಉತ್ತಮ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಉತ್ತರ ಕರ್ನಾಟಕದ ವಿವಿಧ ಪ್ರದೇಶ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಬುಧವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಳಿದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಕಾಸರಗೋಡು, ಕಾರವಾರ, ಹೊನ್ನಾವರ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಮಳೆ ಹೆಚ್ಚಾಗಿರುವ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವ...