ಭಾರತ, ಜೂನ್ 13 -- ಬೆಂಗಳೂರು: ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯೊಬ್ಬಳನ್ನು ಬೆಂಗಳೂರಿನ ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈಕೆಯಿಂದ 10 ಕೋಟಿ ರೂ. ಮೌಲ್ಯದ 5 ಕೆಜಿ 325ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ. ಈ ಮಹಿಳೆ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಅಡಿಯಲ್ಲಿ ಭಾರತಕ್ಕೆ ಬಂದಿದ್ದಳು.

ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದಳು. ನಂತರ ತೆಲಂಗಾಣ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುವುದಾಗಿ ಶೈಕ್ಷಣಿಕ ವೀಸಾ ಪಡೆದಿದ್ದಳು. ಆದರೆ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಮಾರಾಟಕ್ಕೆ ಇಳಿದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಈಕೆ ದೆಹಲಿಯಿಂದ ಬೆಂಗಳೂರಿಗೆ ಮಹಿಳೆಯರ ಉಡುಪುಗಳ ಮಧ್ಯದಲ್ಲಿ ಡ್ರಗ್ಸ್‌ ಅಡಗಿಸಿಟ್ಟು ಕೊಂಡು ತರುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ಮಾದಕವಸ್ತು ವ್ಯಾಪಾರ ಮಾಡುವಾಗ ಪೊಲೀಸರು ಬಂಧಿಸಿ...