ಭಾರತ, ಮೇ 27 -- ಬೆಂಗಳೂರು ಮಹಾನಗರದಲ್ಲಿ ಹೆಚ್ಚಿರುವ ಅರಣ್ಯ ಭೂಮಿ ಒತ್ತುವರಿಗೆ ಚಾಲನೆ ನೀಡಲಾಗಿದ್ದು, ತ್ವರಿತಗತಿಯಲ್ಲಿ ಸಾಗಿದೆ. ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿಯನ್ನು ತೆರವು ಮಾಡಿಸಲಾಗಿದೆ. ಕಳೆದ 2 ವರ್ಷಗಳಲ್ಲಿ 1205 ಒತ್ತುವರಿ ಪ್ರಕರಣಗಳಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 6251.31 ಎಕರೆ ಅರಣ್ಯ ತೆರವು ಮಾಡಿಸಲಾಗಿದೆ.ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ 99 ವರ್ಷಕ್ಕೆ ಇಳಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗ ಇವುಗಳಲ್ಲಿ ಕೆಲವು ಗುತ್ತಿಗೆ ಅವಧಿ ಮುಗಿದಿದ್ದರೂ ಅರಣ್ಯ ಇಲಾಖೆಗೆ ಜಮೀನು ಬಿಟ್ಟುಕೊಡದೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಎಲ್ಲ ಭೂಮಿ ಹಿಂಪಡೆಯಲು ಮತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.