ಭಾರತ, ಮಾರ್ಚ್ 10 -- ಬೆಂಗಳೂರು: ಆಧುನಿಕ ಜೀವನಶೈಲಿಯಲ್ಲಿ ನಿದ್ರಾಹೀನತೆಯಿಂದ ಬಳಲುತ್ತಿರುವವರ ಸಂಖ್ಯೆ ಸಾಕಷ್ಟಿದೆ. ಈ ಪ್ರಮಾಣ ಉದ್ಯಾನ ನಗರಿ ಬೆಂಗಳೂರಿನಲ್ಲಿ ತುಸು ಹೆಚ್ಚೇ ಇದೆ ಎಂದು ವರದಿಯೊಂದು ಹೇಳಿದೆ. ಐಟಿ ರಾಜಧಾನಿಯಾಗಿರುವ ಬೆಂಗಳೂರಿನಲ್ಲಿ ದೇಶ-ವಿದೇಶದ ಲಕ್ಷಾಂತರ ಜನರು ನೆಲೆಸಿದ್ದಾರೆ. ಕೆಲಸ ಹಾಗೂ ವೈಯಕ್ತಿಕ ಜೀವನವನ್ನು ನಿಭಾಯಿಸುವಲ್ಲಿ ಹಲವರು ಒತ್ತಡ ಅನುಭವಿಸುತ್ತಿರುವುದು ಸಾಮಾನ್ಯ. ಹೀಗಾಗಿ ನಗರದ ನಿವಾಸಿಗಳು ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ ಎಂಬ ಅಂಶ ಸಮೀಕ್ಷೆಯೊಂದರಲ್ಲಿ ಬಹಿರಂಗವಾಗಿದೆ. ಶೇ. 56ರಷ್ಟು ಜನರು ಪ್ರತಿ ರಾತ್ರಿ ಆರು ಗಂಟೆಗಳಿಗಿಂತ ಕಡಿಮೆ ಸಮಯ ನಿದ್ರೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಮಾರ್ಚ್ 14ರಂದು ವಿಶ್ವ ನಿದ್ರಾ ದಿನವನ್ನು ಆಚರಿಸಲಾಗುತ್ತಿದೆ. ಅದಕ್ಕೂ ಮುನ್ನ ಲೋಕಲ್ ಸರ್ಕಲ್ಸ್ ಎಂಬ ಸಂಸ್ಥೆ ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ವರದಿ ಬಹಿರಂಗಪಡಿಸಿದೆ.

'2025ರಲ್ಲಿ ಭಾರತ ಹೇಗೆ ನಿದ್ರಿಸುತ್ತದೆ' ಎಂಬ ಶೀರ್ಷಿಕೆಯಡಿ ನಡೆದ ಸಮೀಕ್ಷೆಯು ಉದ್ಯಾನ ನಗರಿಯ 5,563 ವ್ಯ...