Bengaluru, ಮೇ 9 -- ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 9) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕರಾವಳಿ ಪ್ರದೇಶದಲ್ಲಿ ಸಂಜೆ ಮಳೆಯಾಗುವ ಸಾಧ್ಯತೆಯಿದೆ. ಮಳೆ ಕಡಿಮೆಯಾದ ಕಡೆಗೆ ತಾಪಮಾನ ಹೆಚ್ಚಳ ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. ಕಲಬುರಗಿಯಲ್ಲಿ ಹೆಚ್ಚಿನ ಬಿಸಿಲು ಇರಲಿದ್ದು, ಗರಿಷ್ಟ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 9) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 9) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಬೆಂಗಳೂರು ನಗರ...