Bangalore, ಜೂನ್ 2 -- ಬೆಂಗಳೂರು: ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153.39 ಎಕರೆ ಅರಣ್ಯ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನವನ ಅಭಿವೃದ್ಧಿಪಡಿಸಲಾಗುತ್ತಿದೆ.ಎಲ್ಲ 154 ಎಕರೆ ಅರಣ್ಯ ಭೂಮಿಗೂ ಕಾಂಪೌಂಡ್ ಹಾಕಲಾಗಿದ್ದು, ಒತ್ತುವರಿ ಆಗದಂತೆ ರಕ್ಷಿಸಲಾಗಿದೆ. ಈ ಪ್ರದೇಶದಲ್ಲಿ ಇಂದಿರಾಗಾಂಧೀ ಜೈವಿಕ ಉದ್ಯಾನ, ವಿಶ್ವಗುರು ಬಸವಣ್ಣ ದಿವ್ಯೌಷಧೀಯ ಸಸ್ಯ ವನ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪಕ್ಷಿ ಲೋಕ, ನಾಡಪ್ರಭು ಕೆಂಪೇಗೌಡ ಕಿರು ಮೃಗಾಲಯ ಹಾಗೂ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣ ಮಾಡಲು ಸಲಹೆ ಬಂದಿದೆ, ಈ ಬಗ್ಗೆ ಯೋಜನೆ ರೂಪಿಸಲು ಕರ್ನಾಟಕ ಅರಣ್ಯ ಇಲಾಖೆ ಮುಂದಾಗಿದೆ. ಪ್ರಸ್ತುತ ಈ 154 ಎಕರೆ ಪ್ರದೇಶದಲ್ಲಿ ನೀಲಗಿರಿಯ ಜೊತೆಗೆ ಹೊನ್ನೆ, ಬೀಟೆ, ಜಾಲಿ, ಕಗ್ಗಲಿ, ಎಲಚಿ, ಚಿಗರೆ, ಹೊಳೆಮತ್ತಿ, ಮತ್ತಿ, ಕರಿಮತ್ತಿ ಮೊದಲಾದ 800 ಮರಗಳಿದ್ದು, ಅವುಗಳನ್ನು ಸಂರಕ್ಷಿಸಲಾಗುತ್ತಿದೆ.
ಮಾದಪ್ಪನಹಳ್ಳಿ ನೆಡುತೋಪಿನಲ್ಲಿ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವಶದಲ್ಲಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ವಿಧ್ಯುಕ್ತವಾಗಿ ಹ...
Click here to read full article from source
To read the full article or to get the complete feed from this publication, please
Contact Us.