Bengaluru, ಮೇ 27 -- ಬೆಂಗಳೂರು: ಟ್ರ್ಯಾಕ್ಟರ್‌ಗಳನ್ನು ಸಾಮಾನ್ಯವಾಗಿ ಕೃಷಿ ಕೆಲಸಗಳಿಗೆ ಬಳಸಲಾಗುತ್ತದೆ. ಇವುಗಳನ್ನು ಕೃಷಿ ಕೆಲಸಗಳಿಗೆ ಅನುಕೂವಾಗುವಂತೆಯೂ ವಿನ್ಯಾಸ ಮಾಡಲಾಗಿರುತ್ತದೆ. ಆದರೆ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್‌ಗಳ ಹಾವಳಿ ಹೆಚ್ಚಿದ್ದು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುತ್ತಾ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಕಟ್ಟಡಗಳ ತ್ಯಾಜ್ಯ ಸಾಗಣೆ ಮೊದಲಾದ ಕೆಲಸಗಳಿಗೆ ಟ್ರ್ಯಾಕ್ಟರ್‌ಗಳನ್ನು ಬಳಸಲಾಗುತ್ತಿದ್ದು ಸಾರ್ವಜನಿಕ ಸುರಕ್ಷತೆ ಮತ್ತು ಪರಿಸರಕ್ಕೆ ಮಾರಕವಾಗಿವೆ. ನಗರದ ಯಾವುದೇ ರಸ್ತೆಗಳಲ್ಲಿ ಸಂಚರಿಸುತ್ತಿದ್ದರೂ ಈ ಟ್ರ್ಯಾಕ್ಟರ್‌ಗಳು ಕಣ್ಣಿಗೆ ಬೀಳುತ್ತವೆ. ಕಿರಿದಾದ ರಸ್ತೆಗಳಲ್ಲಿ ಸಾಗುತ್ತಾ ಖಾಲಿ ಉಳಿದಿರುವ ಪ್ರದೇಶಗಳಲ್ಲಿ ವಿವಿಧ ರೀತಿಯ ತ್ಯಾಜ್ಯವನ್ನು ಸುರಿಯುವ ದೃಶ್ಯಗಳು ಸರ್ವೇ ಸಾಮಾನ್ಯವಾಗಿವೆ. ಈ ಟ್ರ್ಯಾಕ್ಟರ್‌ಗಳಿಗೆ ಈ ಯಾವ ಕೆಲಸಕ್ಕೂ ಅನುಮತಿ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಟ್ರ್ಯಾಕ್ಟರ್‌ಗಳನ್ನು ನಿಯಂತ್ರಿಸಲು ಮುಂದಾಗಿದೆ.
ಕೃಷಿ ಚಟುವಟಿಕೆಗಳ ಹೆಸರಿನಲ್ಲಿ ಟ್ರ್ಯಾಕ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.