ಭಾರತ, ಏಪ್ರಿಲ್ 12 -- ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇಂದಿನಿಂದ ಮೂರು ದಿನ ರೈತಸಂತೆ ನಡೆಯುತ್ತಿದೆ. ನೇರ ಮಾರಾಟದ ಮೂಲಕ ನಮ್ಮ ಹೋರಾಟ' 'ನಮ್ಮ ಬೆಳೆಗೆ ನಮ್ಮದೇ ಬೆಲೆ' ಶೀರ್ಷಿಕೆಯಡಿಯಲ್ಲಿ ಈ ರೈತಸಂತೆಯನ್ನು ಆಯೋಜಿಸಲಾಗಿದೆ. ಆರ್‌ ಆರ್‌ ನಗರದ ಐಡಿಯಲ್‌ ಹೋಮ್ಸ್‌ ಲೇಔಟ್‌ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಏಪ್ರಿಲ್‌ 12 ರಿಂದ 14ರವರೆಗೆ ಪ್ರತಿದಿನ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಕುಸಿಯುತ್ತಿರುವ ಬೆನ್ನಲ್ಲೇ ರೈತರೇ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ಮಾರಾಟ ಮಾಡಲು ಮುಂದಾಗಿರುವುದು ಈ ರೈತ ಸಂತೆಯ ಉದ್ದೇಶ.

ಎಲ್ಲೆಂದರಲ್ಲಿ ತರಕಾರಿ ಹೂ ಹಣ್ಣುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಸುವುದಕ್ಕಿಂತ ಇದು ಉತ್ತಮ ಕ್ರಮ ಎಂದು ಶ್ಲಾಘನೆ ವ್ಯಕ್ತವಾಗುತ್ತಿದೆ. ರಾಜ್ಯ ರೈತಸಂಘದ ನಾಯಕಿ ಹಾಗೂ ಪರಿಸರವಾದಿಯೂ...