ಭಾರತ, ಏಪ್ರಿಲ್ 12 -- ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಇಂದಿನಿಂದ ಮೂರು ದಿನ ರೈತಸಂತೆ ನಡೆಯುತ್ತಿದೆ. ನೇರ ಮಾರಾಟದ ಮೂಲಕ ನಮ್ಮ ಹೋರಾಟ' 'ನಮ್ಮ ಬೆಳೆಗೆ ನಮ್ಮದೇ ಬೆಲೆ' ಶೀರ್ಷಿಕೆಯಡಿಯಲ್ಲಿ ಈ ರೈತಸಂತೆಯನ್ನು ಆಯೋಜಿಸಲಾಗಿದೆ. ಆರ್ ಆರ್ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮುನಿವೆಂಕಟಯ್ಯ ಸ್ಮಾರಕ ಬಯಲು ರಂಗಮಂದಿರದಲ್ಲಿ ಏಪ್ರಿಲ್ 12 ರಿಂದ 14ರವರೆಗೆ ಪ್ರತಿದಿನ ಬೆಳಗ್ಗೆ 7ರಿಂದ ಸಂಜೆ 7 ಗಂಟೆಯವರೆಗೆ ನಡೆಯಲಿದೆ. ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಕುಸಿಯುತ್ತಿರುವ ಬೆನ್ನಲ್ಲೇ ರೈತರೇ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ರೈತರು ತಾವು ಬೆಳೆದ ಕೃಷಿ ಉತ್ಪನ್ನಗಳಿಗೆ ತಾವೇ ಬೆಲೆ ನಿಗದಿಪಡಿಸಿ ಮಾರಾಟ ಮಾಡಲು ಮುಂದಾಗಿರುವುದು ಈ ರೈತ ಸಂತೆಯ ಉದ್ದೇಶ.
ಎಲ್ಲೆಂದರಲ್ಲಿ ತರಕಾರಿ ಹೂ ಹಣ್ಣುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಸುವುದಕ್ಕಿಂತ ಇದು ಉತ್ತಮ ಕ್ರಮ ಎಂದು ಶ್ಲಾಘನೆ ವ್ಯಕ್ತವಾಗುತ್ತಿದೆ. ರಾಜ್ಯ ರೈತಸಂಘದ ನಾಯಕಿ ಹಾಗೂ ಪರಿಸರವಾದಿಯೂ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.