ಭಾರತ, ಜನವರಿ 30 -- ಬೆಂಗಳೂರು: ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿ ಪಟ್ಟಣಗಳನ್ನು ರಸ್ತೆ ಮತ್ತು ರೈಲು ಸಂಪರ್ಕಗಳೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈ ಕುರಿತು ಸಚಿವ ಸಂಪುಟ ಅನುಮೋದನೆ ನೀಡಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ, ರಾಮನಗ ತಾಲ್ಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ. ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಭಾಗಶ: ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ "ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ" ಯೋಜನೆಯನ್ನು ಅನುಷ್ಟಾನಗೊಳಿಸಲು ಇಂದು (ಜ.30) ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವ ಸಂಪುಟ ಅನುಮೋದನೆ ನೀಡಿದೆ.

2006ರ ಅಕ್ಟೋಬರ್‌ 18ರಂದು ಹೊರಡಿಸ...