Bangalore, ಮೇ 11 -- ಬೆಂಗಳೂರು:ಬೆಂಗಳೂರು ಸೇರಿದಂತೆ ಕರ್ನಾಟಕದ ನಾನಾ ಜಿಲ್ಲೆಗಳಲ್ಲಿ ಮೇ ತಿಂಗಳಿನಲ್ಲಿಯೂ ಮಳೆಯಾಗುತ್ತಿದ್ದು, ಈ ತಿಂಗಳ ಮೂರನೇ ವಾರವೂ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಅದರಲ್ಲೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಬಿರು ಬಿಸಿಲಿನಿಂದ ಬಳಲಿರುವ ಉತ್ತರ ಕರ್ನಾಟಕದ ಕಲಬುರಗಿ ಸಹಿತ ಪ್ರಮುಖ ಜಿಲ್ಲೆಗಳು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೇ 11ರ ಭಾನುವಾರವು ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ. ಕೆಲ ಭಾಗಗಳಲ್ಲಿ ಬಿಸಿಲು ಕೂಡ ಇರಲಿದೆ ಎಂದು ತಿಳಿಸಲಾಗಿದೆ.

ಭಾನುವಾರದಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗಬಹುದು.

ಉತ್ತರ ಒಳನಾಡಿನ ಬೆಳಗ...