Bengaluru, ಏಪ್ರಿಲ್ 18 -- ಕರ್ನಾಟಕದ ಬೆಂಗಳೂರು, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಹಾಸನ ಸಹಿತ ಹಲವು ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಮಳೆಯೂ ಆಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬಿರುಬಿಸಿಲು ಎದುರಿಸುತ್ತಿರುವ ಉತ್ತರ ಕರ್ನಾಟಕದ ಯಾದಗಿರಿ, ಬೀದರ್‌, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಹಗುರ ಮಳೆ ಶುಕ್ರವಾರ ಆಗುವ ಸಾಧ್ಯತೆಗಳಿವೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಸೂಚನೆಯಿದ್ದರೆ, ಉಳಿದೆಡೆ ಒಣ ಹವೆಯ ವಾತಾವರಣ ಇರಲಿದೆ. ಅಲ್ಲಲ್ಲಿ ಮಳೆಯಾಗುತ್ತಿದ್ದರೂ ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ಪ್ರಮಾಣವೂ ಏರಿಕೆಯಾಗಿದೆ. ಇದರ ನಡುವೆಯೇ ಮುಂದಿನ ವಾರವೂ ಕರ್ನಾಟಕದಲ್ಲಿ ಮಳೆಯಾಗುವ ಸೂಚನೆಗಳಿವೆ.

Published by HT Digital Content Services with permission from HT Kannada....