ಭಾರತ, ಮೇ 6 -- ಇಂದಿನ ಹವಾಮಾನ: ಕರ್ನಾಟಕದ ರಾಜಧಾನಿ ಬೆಂಗಳೂರು, ಉತ್ತರ ಒಳನಾಡಿನ ಬೀದರ್, ಯಾದಗಿರಿ ಸೇರಿ 13 ಜಿಲ್ಲೆಗಳಲ್ಲಿ ಇಂದು (ಮೇ 6) ಹಗುರದಿಂದ ಸಾಧಾರಣ ಮಳೆಯಾಗಬಹುದು. ಉಳಿದೆಡೆ ಒಣಹವೆ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ ಹೆಚ್ಚಳವಾಗಿ ಸುಡು ಬಿಸಿಲು ಕಾಡಬಹುದು. ಮಳೆ ಕಡಿಮೆಯಾದ ಕಡೆಗೆ ತಾಪಮಾನ ಹೆಚ್ಚಳ ಕಾಡಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಪ್ರಕಾರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 6) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದ ಗಾಳಿ ಬೀಸಲಿದ್ದು, ಹಗುರ ಮಳೆಯಾಗಬಹುದು ಅಥವಾ ಗುಡುಗು ಸಹಿತ ಮಳೆಯಾಗಬಹುದು.
ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು (ಮೇ 6) ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿನ್ನೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.