ಭಾರತ, ಏಪ್ರಿಲ್ 11 -- Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಪ್ರದೇಶದ ವಿಜಯನಗರ ಹೊರತು ಪಡಿಸಿ ಉಳಿದೆಲ್ಲ ಜಿಲ್ಲೆಗಳು, ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳು ಸೇರಿ 23 ಜಿಲ್ಲೆಗಳ ವಿವಿಧೆಡೆ ಇಂದು ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದ ಗಾಳಿ, ಗುಡುಗು ಮತ್ತು ಮಿಂಚು ಕೂಡ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು (ಏಪ್ರಿಲ್ 11) ಮಳೆ ಹಾಗೂ ಮೋಡ ಕವಿದ ವಾತಾವರಣ ಇದೆ. ಆದಾಗ್ಯೂ, ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಶಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ವರದಿ ಹೇಳಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗ...