ಭಾರತ, ಮೇ 21 -- ಬೆಂಗಳೂರು: ಆನೇಕಲ್ ತಾಲೂಕು ಚಂದಾಪುರ ರೈಲ್ವೆ ಸೇತುವೆ ಬಳಿ ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಸೂಟ್ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ನೀಲಿ ಬಣ್ಣದ ಸೂಟ್ಕೇಸ್ ಒಳಗೆ ಬಾಲಕಿಯ ಶವ ರುಂಡ- ಮುಂಡ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಸೂಟ್ಕೇಸ್ ಅನಾಥವಾಗಿ ಬಿದ್ದಿರುವ ಬಗ್ಗೆ ಮಾಹಿತಿ ಲಭ್ಯವಾದ ಕಾರಣ ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿದ್ದರು. ಸೂಟ್ಕೇಸ್ ಪರಿಶೀಲಿಸಿದಾಗ ಅದರಲ್ಲಿ ಬಾಲಕಿಯ ಶವ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಾಲಕಿಗೆ 10 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಬಾಲಕಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Published by HT Digital Content Services with permission from HT Kannada....
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.