ಭಾರತ, ಮೇ 14 -- ಬೆಂಗಳೂರು: ಬೆಂಗಳೂರಿನ ವಿವಿಧೆಡೆ ಗುರುವಾರ (ಮೇ 15) ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆ ತನಕ ಪವರ್ ಕಟ್ ಚಾಲ್ತಿಯಲ್ಲಿ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಆಯ್ದ ಸಬ್‌ಸ್ಟೇಷನ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಕಾರಣ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಅದು ಸ್ಪಷ್ಟಪಡಿಸಿದೆ.

ಬೆಸ್ಕಾಂ ಪ್ರಕಟಣೆಯ ಪ್ರಕಾರ, ಗುರುವಾರ (ಮೇ 15) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66 ಕೆವಿ ಬಾಣಸವಾಡಿ - ಹೆಚ್‌ಬಿ ಆರ್ ಲೈನ್ ಮತ್ತು 66 ಕೆವಿ ಬಾಣಸವಾಡಿ - ಐಟಿಐ ಲೈನ್‌ಗಳಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸಲಾಗುತ್ತದೆ. ಹೀಗಾಗಿ ಈ ಕೆಳಗಿನ ಸ್ಥಳಗಳಲ್ಲಿ ಘೋಷಿತ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇ ಔಟ್, ಚಿನ್ನಸ್ವಾಮಪ್ಪ ಲೇ ಔಟ್, ಕೋಕೋನಟ್‌ ಗ್ರೋವ್, ದೇವಮಾತಾ ಶಾಲೆ, ಅಮರ್‌ ರೀಜೆನ್ಸಿ, ವಿಜಯ ಬ್ಯ...