ಭಾರತ, ಮೇ 7 -- ಜಿಎಸ್ ಸಿದ್ದಲಿಂಗಯ್ಯ ನಿಧನ: ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕ್ರೀಯಾಶೀಲವಾಗಿ ಸೇವೆ ಸಲ್ಲಿಸಿದ್ದ ತುಮಕೂರು ಮೂಲದ ಜಿ ಎಸ್ ಸಿದ್ದಲಿಂಗಯ್ಯ(94) ಅವರು ಇಂದು ಬೆಂಗಳೂರು ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ತುಮಕೂರು ಜಿಲ್ಲೆ ಬೆಳ್ಳಾವಿ ಮೂಲದವರಾದ ಜಿಎಸ್ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರ ಪೈಕಿ ಒಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ.
ಕನ್ನಡದ ಖ್ಯಾತ ಹಿರಿಯ ಕವಿ, ಶಿಕ್ಷಣ ತಜ್ಞ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿದ್ದ ಪ್ರೊ. ಜಿ ಎಸ್ ಸಿದ್ದಲಿಂಗಯ್ಯ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಂಸ್ಕೃತಿಕ ಜಗತ್ತಿಗೆ ಕವಿ ಜಿ ಎಸ್ ಸಿದ್ದಲಿಂಗಯ್ಯ ಅವರ ಕೊಡುಗೆ ಗಮನಾರ್ಹವಾದದ್ದು. ಕನ್ನಡ ಸಾಹಿತ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.