ಭಾರತ, ಜನವರಿ 26 -- ಬೆಂಗಳೂರು: ಸೈಬರ್ ವಂಚನೆಗಳ ಕುರಿತು ಪ್ರತಿದಿನ ವರದಿಗಳು ಪ್ರಕಟವಾಗುತ್ತಲೇ ಇವೆ. ಪೊಲೀಸರು ಕೂಡಾ ಇಂತಹ ವಂಚನೆಗಳಿಗೆ ಬಲಿಯಾಗದಂತೆ ಎಚ್ಚರಿಕೆ ನೀಡುತ್ತಲೇ ಇರುತ್ತಾರೆ. ಆದರೂ ಸಾರ್ವಜನಿಕರು ಮಾತ್ರ ಮೋಸ ಹೋಗುತ್ತಿರುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಬೆಂಗಳೂರಿನ ನಿವಾಸಿಯೊಬ್ಬರಿಗೆ ವಂಚಕರು ಹೆದರಿಸಿ 1.78 ಕೋಟಿ ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಹದೇವಪುರದ ಕೆಜಿಎಫ್ ಮುನಿರೆಡ್ಡಿ ಪಾಳ್ಯದ ನಿವಾಸಿ ಎಲ್.ಪರಮಶಿವಂ, ಸೈಬರ್ ವಂಚಕರ ಮೋಸಕ್ಕೆ ಬಲಿಯಾಗಿ ಹಣ ಕಳೆದುಕೊಂಡ ಸಂತ್ರಸ್ತರಾಗಿದ್ದಾರೆ. ಸದ್ಯ ದೂರು ಆಧರಿಸಿ ವೈಟ್‌ಫೀಲ್ಡ್ ವಿಭಾಗದ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಜನವರಿ 3ರಂದು ಪರಮಶಿವಂಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, ಕ್ರೆಡಿಟ್ ಕಾರ್ಡ್ ಬಿಲ್ 1.20 ಲಕ್ಷ ರೂ. ಪಾವತಿ ಮಾಡಿಲ್ಲ. ಈ ಬಗ್ಗೆ ದೆಹಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ಯಾಂಕ್ ಖಾತೆ ಪರಿಶೀಲನೆ ಮಾಡುವ ಅವಶ್ಯಕತೆ...
Click here to read full article from source
To read the full article or to get the complete feed from this publication, please
Contact Us.