ಭಾರತ, ಫೆಬ್ರವರಿ 25 -- ಬೆಂಗಳೂರು: ಅತ್ಯಾಚಾರಕ್ಕೊಳಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಲು ಬಂದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕಾನ್ಸ್‌ಟೇಬಲ್‌ ಸೇರಿದಂತೆ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಬೊಮ್ಮನಹಳ್ಳಿ ಠಾಣೆ ಕಾನ್ಸ್‌ಟೇಬಲ್‌ ಅರುಣ್ ತೊಣೆಪ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

17 ವರ್ಷದ ಸಂತ್ರಸ್ತ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಠಾಣಾ ವ್ಯಾಪ್ತಿಯ ಬಡಾವಣೆಯೊಂದರಲ್ಲಿ ತನ್ನ ತಾಯಿಯೊಂದಿಗೆ ಸಂತ್ರಸ್ತೆ ವಾಸಿಸುತ್ತಿದ್ದರು. ಸಂತ್ರಸ್ತೆಗೆ ನೆರೆಮನೆಯ ವಿವಾಹಿತ ವ್ಯಕ್ತಿಯ ಪರಿಚಯವಾಗಿದೆ. ಆರೋಪಿಯು ವಿವಾಹ ಮಾಡಿಕೊಳ್ಳುವುದಾಗಿ ನಂಬಿಸಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಹಲ್ಲೆ ಮಾಡಿದ್ದಾನೆ. ಈ ವಿಷಯವನ್ನು ಬಾಲಕಿ, ತನ್ನ ತಾಯಿಗೆ ತಿಳಿಸಿದ್ದಳು. ನಂತರ ಬಾಲಕಿಯ ತಾಯಿ ದೂರು ಸಲ್ಲಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದೂರು ನೀಡಲು ತೆರಳಿದ್ದ ಸಂತ್ರಸ್ತೆಯನ್ನು ಕಾನ್‌ಸ್ಟೆಬಲ್‌ ಅರುಣ್ ಪರಿಚಯಿಸಿಕ...