ಭಾರತ, ಮೇ 20 -- ಬೆಂಗಳೂರು: ಷೇರು ಮಾರುಕಟ್ಟೆ ಆಪ್ ಜಾಹಿರಾತು ನಂಬಿ ಸಾಫ್ಟ್ವೇರ್ ಎಂಜಿನಿಯರ್ ಒಬ್ಬರು 2.39 ಕೋಟಿ ರೂ. ಹೂಡಿಕೆ ಮಾಡಿ ಹಣ ಕಳೆದುಕೊಂಡಿದ್ದು, ವೈಟ್ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ, ಕೆಲಸದ ಒತ್ತಡ ಹೆಚ್ಚಾಗಿ ಐಟಿಬಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮತ್ತೊಂದೆಡೆ, ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 41 ವರ್ಷದ ಎಂಜಿನಿಯರ್ ಫೇಸ್ಬುಕ್ ನೋಡುತ್ತಿದ್ದಾಗ ಆಲಿಸ್ ಬ್ಲೂ ಎಂಬ ಟ್ರೇಡಿಂಗ್ ವ್ಯವಹಾರದ ಜಾಹೀರಾತು ಕಾಣಿಸಿಕೊಂಡಿದೆ. ಅದರ ಮೇಲೆ ಕ್ಲಿಕ್ ಮಾಡಿದಾಗ ಆಲಿಸ್ ಬ್ಲೂ ವಾಟ್ಸ್ ಆ್ಯಪ್ ಗ್ರೂಪ್ಗೆ ಸೇರ್ಪಡೆಯಾಗಿದ್ದಾರೆ. ಪೂಜಾ ಶೈನ್ ಎಂಬ ಹೆಸರಿನಲ್ಲಿ ಓರ್ವ ಯುವತಿ ಟೆಕ್ಕಿಗೆ ಕರೆ ಮಾಡಿ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಸಿಗಲಿದೆ ಎಂದು ನಂಬಿಸಿದ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.