ಭಾರತ, ಮೇ 1 -- ಸಿಲಿಂಡರ್ ಸ್ಫೋಟ: ಬೆಂಗಳೂರು ಉತ್ತರ ತಾಲೂಕು ನೆಲಮಂಗಲ ಪಟ್ಟಣದ ಬಳಿಯ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನವಾಗಿ ಅಸು ನೀಗಿದ್ದರೆ ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡ ಪ್ರಕರಣ ವರದಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮನೆಯೊಳಗಿನ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ಮೃತರನ್ನು ನಾಗರಾಜು (50) ಮತ್ತು ವರ್ಷದ ಶ್ರೀನಿವಾಸ್ (50) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಅಭಿಷೇಕ್ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾದನಾಯಕನಹಳ್ಳಿ ಪೊಳಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಳ್ಳಾರಿ ಮೂಲದ ನಾಗರಾಜು ಅವರು ಪತ್ನಿ ಲಕ್ಷ್ಮಿದೇವಿ ಮತ್ತು ಮಕ್ಕಳಾದ ಅಭಿಷೇಕ್ ಗೌಡ ಮತ್ತು ಬಸನ ಗೌಡ ಅವರೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಗ್ಯಾಸ್ ಖಾಲಿಯಾಗಿದ್ದಾಗ ಅಭಿಷೇಕ್ ಮತ್ತೊಂದು ಸಿಲಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.