ಭಾರತ, ಮಾರ್ಚ್ 20 -- ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಪ್ರತಿಷ್ಠಿತ ಬಿಇಎಲ್ ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತನನ್ನು ಕೇಂದ್ರ ಗುಪ್ತಚರ ಇಲಾಖೆ, ರಾಜ್ಯ ಗುಪ್ತಚರ ಇಲಾಖೆ ಹಾಗೂ ಮಿಲಿಟರಿ ಇಂಟಲಿಜೆನ್ಸ್ ಜಂಟಿ‌ ಕಾರ್ಯಾಚರಣೆ ನಡೆಸಿ ಬಂಧಿಸಿವೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿಯಾದ ದೀಪ್ ರಾಜ್ ಚಂದ್ರ ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಮತ್ತಿಕೆರೆಯಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ.

ದೀಪ್ ರಾಜ್ ಚಂದ್ರ ಬಿಇಎಲ್‌ನ ಪ್ರಾಡಕ್ಟ್ ಡೆವಲಪ್‌ ಮೆಂಟ್‌ ಆಂಡ್ ಇನ್ನೋವೇಶನ್ ಸೆಂಟರ್ ವಿಭಾಗದಲ್ಲಿ ಹಿರಿಯ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ಈತ ಬಿಇಎಲ್‌ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ. ಮಿಲಿಟರಿ ಇಂಟಲಿಜೆನ್ಸ್ ನಡೆಸಿದ ವಿಚಾರಣೆ ಸಂದರ್ಭದಲ್ಲಿ ಈತ ಸ್ಫೋಟಕ ಮಾಹಿತಿ ಬಾಯಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ದೀಪ್ ರಾಜ್ ಚಂದ್ರ ಬಿಇಎಲ್‌ನ ರಕ್ಷಣಾ ವಿಷಯಗಳು ಸೇರಿದಂತೆ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್...