ಭಾರತ, ಫೆಬ್ರವರಿ 7 -- ಬೆಂಗಳೂರು: 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕೋ) ಕಾಯ್ದೆ' ಕೇಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌, ಪೋಕ್ಸೊ ಕೇಸ್ ರದ್ದು ಇಲ್ಲ ಎಂದು ಸ್ಪಷ್ಟಪಡಿಸಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ 'ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ' ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಇಂದು (ಫೆ 7), ಅವರಿಗೆ ಮಧ್ಯಂತರ ರಿಲೀಫ್ ನೀಡಿದೆ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಕೇಸ್ ರದ್ದುಪಡಿಸುವಂತೆ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆಯನ್ನು ಜ.17ರಂದು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಶುಕ್ರವಾರಕ್ಕೆ (ಫೆ 7) ತೀರ್ಪು ಕಾಯ್ದಿರಿಸಿತ್ತು. ಪ್ರಕರಣದ ಕುರಿತು ಸದಾಶಿವನಗರ ಠಾಣಾ ಪೊಲೀಸರು 2024ರ ಮಾ.14ರಂದು ಯಡ...