Bengaluru, ಫೆಬ್ರವರಿ 24 -- ಬೆಂಗಳೂರು: ಪ್ರೀತಿ ನಿರಾಕರಿಸಿದ ಯುವತಿಯ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ರೌಡಿಯೊಬ್ಬ ಬೆಂಕಿ ಇಟ್ಟು ಅಟ್ಟಹಾಸ ಮೆರೆದಿದ್ದಾನೆ. ಈ ಮೂಲಕ ಆತ ಯುವತಿಯ ಮೇಲೆ ಸೇಡು ತೀರಿಸಿಕೊಳ್ಳಲು ಆತ ಮುಂದಾಗಿದ್ದಾನೆ. ಹನುಮಂತನಗರ ಠಾಣೆಯ ರೌಡಿಶೀಟರ್ ರಾಹುಲ್ ಅಲಿಯಾಸ್ ಸ್ಟಾರ್ ರಾಹುಲ್‌ (26) ಎಂಬಾತ ತನ್ನ ಸಹಚರರೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದಾನೆ.

ಈತನ ವಿರುದ್ಧ ಸುಬ್ರಹ್ಮಣ್ಯಪುರ ಮತ್ತು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಣನಕುಂಟೆ ಸಮೀಪ ಅಡಗಿಕೊಂಡಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ಹೋಗಿದ್ದರು. ಆಗ ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಆಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ ಒಂದು ವರ್ಷದಿಂದ ಸುಬ್ರಹ್ಮಣ್ಯಪುರದ ಹರೇಹಳ್ಳಿಯಲ್ಲಿ ಅಪಾರ್ಟ್‌ ಮೆಂಟ್‌ ವೊಂದನ್ನು ಭ...