Bengaluru, ಫೆಬ್ರವರಿ 24 -- Bengaluru Crime: ಬೆಂಗಳೂರು ಅಶೋಕನಗರದ ಗರುಡಾ ಮಾಲ್ ಬಳಿ ತಡರಾತ್ರಿ 1 ಗಂಟೆ ಸುಮಾರಿಗೆ ರೌಡಿ ಶೀಟರ್‌ ಕಾಂಗ್ರೆಸ್ ಮುಖಂಡನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೈದರ್ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ. ಈತ ತಡರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತನ ಜೊತೆಗೆ ಬೈಕ್ನಲ್ಲಿ ತೆರಳುತ್ತಿದ್ದ. ಮತ್ತೊಂದು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಹೈದರ್ ಅಲಿಯ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಅಶೋಕ ನಗರ ಠಾಣೆ ಪೊಲೀಸರು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ್ದು, ರಕ್ತದ ಮಡುವಲ್ಲಿ ಬಿದ್ದಿದ್ದ ಹೈದರ್ ಅಲಿಯನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ಆಗಮಿಸುವ ವೇಳೆಗೆ ಹೈದರ್ ಅಲಿ ಮೃತಪಟ್ಟಿದ್ದ. ವಿಷಯ ತಿಳಿದ ಹೈದರ್ ಬೆಂಬಲಿಗರು ಬೌರಿಂಗ್ ಆಸ್ಪತ್ರೆ ಬಳಿ ಜಮಾಯಿಸಿ ಲಾಂಗು, ಮಚ್ಚು ಮೊದಲಾದ ಮಾರಕಾಸ್ತ್ರಗಳನ್ನು ಝಳಪಿಸಿದರು. ಬೌರಿಂಗ್ ಆಸ್ಪತ್ರೆಯ ಗೇಟ್‌ ಅನ್ನು ಕಿತ್ತು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ...