ಭಾರತ, ಫೆಬ್ರವರಿ 24 -- Bengaluru Crime: ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮಾಜಿ ಪೊಲೀಸ್‌ ಪೇದೆ ಮುರುಗಪ್ಪ ನಿಂಗಪ್ಪ ಕುಂಬಾರ್‌ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿ ಬಸವರಾಜು ಆರ್. ಮಗದಮ್ ಅವರು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಈ ತಿಂಗಳ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗಾಗಿ ವಿಶೇಷ ತಂಡ ರಚಿಸಿದ್ದರು.

ಮುರುಗಪ್ಪ, ಬೆಳಗಾವಿ ಜಿಲ್ಲೆ, ಚಿಕ್ಕೋಡಿ ತಾಲ್ಲೂಕಿನ ಸದಲಗ ಗ್ರಾಮದ ನಿವಾಸಿ. ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಕೆಲವು ವರ್ಷಗಳ ಹಿಂದೆ ಉದ್ಯೋಗದಿಂದ ವಜಾಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡುತ್ತಿದ್ದ ಆರೋಪಿ, ತಾನು ಲೋಕಾಯುಕ್ತ ಕಚೇರಿಯ ಅಧಿಕಾರಿ ಎಂದು ಹೇಳಿಕೊಳ್ಳುತ್ತಿದ್ದ. ನಿಮ್ಮ ವಿರುದ್ಧ ಅಕ್ರಮ ಆಸ್ತಿ ಗಳ...