ಭಾರತ, ಜನವರಿ 28 -- ಬೆಂಗಳೂರು: ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳವು ಬೆಂಗಳೂರು ಮಹಾ ನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ (ಬಿಡಿಸಿಸಿ) ಮತ್ತು ಅಪೆಕ್ಸ್ ಬ್ಯಾಂಕ್ ಗಳಲ್ಲಿ ಇರಿಸಿದ್ದ ನಿಗದಿತ ಠೇವಣಿ ಖಾತೆಗಳಿಂದ 19.34 ಕೋಟಿ ರೂ. ಹಣವನ್ನು ಕೆಲವು ವ್ಯಕ್ತಿಗಳ ಖಾತೆಗೆ ಅಕ್ರಮವಾಗಿ ವರ್ಗಾಯಿಸಿ ವಂಚಿಸಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಮಹಾಮಂಡಳದ ಅಧ್ಯಕ್ಷ ರಾಜು ವಿ. ಅಕ್ಟೋಬರ್‌ನಲ್ಲಿ ದೂರು ಸಲ್ಲಿಸಿದ್ದರು. ಇವರ ದೂರು ಆಧರಿಸಿ, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ, ಸಂಸ್ಥೆಯ ಹಿಂದಿನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಆಶಾಲತಾ ಪಿ, ಅವರ ಪತಿ ಸೋಮಶೇಖರ್, ವಿಜಯ್ ಕಿರಣ್, ಜೆ. ಮಂಜುನಾಥ್, ಸುಜಯ್, ಬಿಡಿಸಿಸಿ ಮತ್ತು ಅಪೆಕ್ಸ್ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರು ಹಾಗೂ ರಾಜ್ಯ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ಲೆಕ್ಕಪರಿಶೋಧಕರ ವಿರುದ್ಧ ಎಫ್‌ ಐಆರ್‌ ದಾಖಲಾಗಿತ್ತು.

ನಂದಿನಿ ಲೇಔಟ್ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ ನಂತರ, ಪ್ರಕರಣದ ತನಿಖೆಯನ್ನು ಸಿಐಡಿಗೆ...