Bengaluru, ಫೆಬ್ರವರಿ 10 -- ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್ ದಂಪತಿ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸಹಕಾರ ಸಂಘಗಳ ಉಪ ರಿಜಿಸ್ಟ್ರಾರ್ ಗಂಗಾಧರ್ ಅವರು ದೂರು ಸಲ್ಲಿಸಿದ್ದಾರೆ.
ಈ ದೂರಿನ ಮೇರೆಗೆ ಶಶೀಂದ್ರಾ ಮತ್ತು ಅಶೋಕ್ ದಂಪತಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಮತ್ತು ಅಧಿಕ ಬಡ್ಡಿ ವಸೂಲಿ ನಿಷೇಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿದ್ಧಾಪುರ ಕೆ.ಎಂ.ಕಾಲೊನಿ ನಿವಾಸಿ ಸಮೀನ್ ತಾಜ್ ಎಂಬುವರು ತಮ್ಮ ಸಹೋದರಿಯ ವಿವಾಹಕ್ಕಾಗಿ ತಮ್ಮ ಸಂಬಂಧಿ ಮೊಹಮ್ಮದ್ ರಫೀಕ್ ಅವರ ಸಹಾಯದಿಂದ ಶಶೀಂದ್ರಾ ಅವರಿಂದ 2021ರ ಜುಲೈನಲ್ಲಿ ತಿಂಗಳಿಗೆ ಶೇ. 5 ರ ಬಡ್ಡಿ ದರದಲ್ಲಿ 1.60 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಸಾಲ ಪಡೆಯುವಾಗ ಖಾಲಿ ಚೆಕ್ ನೀಡಿದ್ದರು. ಬಳಿಕ ಪ್ರತಿ ತಿಂಗಳು 8 ಸ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.