ಭಾರತ, ಮಾರ್ಚ್ 1 -- ಬೆಂಗಳೂರು: ರೌಡಿ ಚಟುವಟಿಕೆಗಳಲ್ಲಿ ಬಾಗಿಯಾಗಿದ್ದ ಕುಖ್ಯಾತ ಸರಗಳ್ಳರೂ ಆಗಿದ್ದ ಇಬ್ಬರು ರೌಡಿಗಳನ್ನು ಬಂಧಿಸುವಲ್ಲಿ ಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬನ್ನೇರುಘಟ್ಟ ರಸ್ತೆಯ ಲಕ್ಷ್ಮೀಲೇಔಟ್ ನಿವಾಸಿ ಮೊಹಮ್ಮದ್‌ ಜಬೀವುದ್ದೀನ್‌ ಅಲಿಯಾಸ್‌ ತಬ್ರೇಜ್‌ (39) ಹಾಗೂ ಜಯನಗರ ನಾಲ್ಕನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಮೆಹತಾಬ್‌ ಬಂಧಿತ ಆರೋಪಿಗಳು. ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮೊಹಮ್ಮದ್ ಜಬೀವುದ್ದೀನ್‌ ವಿರುದ್ಧ ಒಟ್ಟು 73 ಪ್ರಕರಣಗಳು ದಾಖಲಾಗಿದ್ದರೆ, ಮೊಹಮ್ಮದ್ ಮೆಹತಾಬ್ ವಿರುದ್ಧ 31 ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಪದೇ ಪದೇ ತಮ್ಮ ವಾಸ ಸ್ಥಳವನ್ನು ಬದಲಾಯಿಸುತ್ತಾ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸುತ್ತಿದ್ದರು. ಕೊನೆಗೂ ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಸರಗಳ್ಳತನ ಹಾಗೂ ರೌಡಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದ ಇಬ್ಬರನ್ನೂ ಈ ಹಿಂದೆ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪ...