ಭಾರತ, ಏಪ್ರಿಲ್ 15 -- ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ "ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.

ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್‌ ಅಪ್ನಿಯಾ (ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್‌ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್‌(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.

ಇದಷ್ಟೇ ಅಲ್ಲದೆ, ಇವರ ಅತಿ...