ಭಾರತ, ಮೇ 16 -- ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ, ಬಿಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಆಫ್ರಿಕಾ ದೇಶದ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ 4 ಕೋಟಿ ರೂ. ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಚ್ಯುತನಗರದ ಮನೆಯೊಂದರಲ್ಲಿ ಇಬ್ಬರು ವಿದೇಶಿ ಪ್ರಜೆಗಳು ವಾಸವಾಗಿದ್ದರು. ಇವರು ಎಂಡಿಎಂಎ ಕ್ರಿಸ್ಟಲ್ ಅನ್ನು ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರಿಗೆ ಲಭಿಸಿತ್ತು.
ಸಿಸಿಬಿ ಪೊಲೀಸರು ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇವರ ಮನೆ ಮೇಲೆ ದಾಳಿ ನಡೆಸಿ ವಿದೇಶಿ ಪ್ರಜೆಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ 2 ಕೆಜಿ 585 ಗ್ರಾಂ.ಎಂಡಿಎಂಎ ಕ್ರಿಸ್ಟಲ್, ದ್ವಿಚಕ್ರ ವಾಹನ ಮತ್ತು ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಈ ಡ್ರಗ್ಸ್ ಮೌಲ್ಯ 4 ಕೋಟಿ ರೂ. ಎಂದು ತಿಳಿದು ಬಂದಿದೆ.
ಆರೋಪಿಯು ವ್ಯಾಪಾರ ವೀಸಾದಲ್ಲಿ ಭಾರತಕ್ಕೆ ...
Click here to read full article from source
To read the full article or to get the complete feed from this publication, please
Contact Us.